ವಿರಾಜಪೇಟೆ: ಮೇಲ್ದರ್ಜೆಗೇರಿಸಿದ ಹಾಗೂ ಪುನರಾರಂಭಗೊಂಡ ಹೊಸ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಿಗೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಒಟ್ಟು 8 ಬಸ್ ಮಾರ್ಗಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಲಾಗಿದೆ. ಈ 8 ಮಾರ್ಗಗಳಿಗೆ ಹೆಚ್ಚುವರಿಯಾಗಿ 8 ಬಸ್‌ಗಳನ್ನು ಒದಗಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಬಸ್ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್, ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ, ವಿರಾಜಪೇಟೆ ಪುರಸಭೆಯ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆಯ ಸದಸ್ಯರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯ ಕಲ್ಪಿಸಿದ್ದು ಇದರಿಂದ ನಾಡಿನ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆಎ.ಎಸ್. ಪೊನ್ನಣ್ಣ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.