ಕುಶಾಲನಗರ: ಪಟ್ಟಣದ ಟೋಲ್‌ಗೇಟ್ ಬಳಿ ಕೊಪ್ಪ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ನೌಕರ ಅರುಣ್ (52) ಅವರ ಮೃತದೇಹ ಐದು ದಿನಗಳ ನಂತರ ಸೋಮವಾರ ಪತ್ತೆಯಾಗಿದೆ.
ಅರುಣ್ ಅವರು ಮಡಿಕೇರಿಯ ಉಪವಿಭಾಗಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಬುಧವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡಿವೈಎಸ್ಪಿ ಗಂಗಾಧರ್ ಅವರ ನೇತೃತ್ವದಲ್ಲಿ ಎನ್‌ಡಿಆರ್‌ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆಯನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.
ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಾಚಹಳ್ಳಿ ಗ್ರಾಮದವರಾದ ಅರುಣ್ ಇಲ್ಲಿನ ಹೊಸ ಹೌಸಿಂಗ್ ಬೋರ್ಡ್‌ನಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.