
ಕುಶಾಲನಗರ: ಕ್ರೀಡಾಪಟುಗಳು ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸದಿಂದ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಜತೆಗೆ ಸುರಕ್ಷತೆ, ತಂಡ ಮನೋಭಾವ ಹಾಗೂ ಪರಸ್ಪರ ಗೌರವ ಕಾಪಾಡಿಕೊಳ್ಳಬೇಕು ಎಂದು ಸೈನಿಕ ಶಾಲೆಯ ನಿವೃತ್ತ ಪ್ರಾಂಶುಪಾಲ ಕಮೋಡೋರ್ ಎಂ.ಟಿ. ರಮೇಶ್ ಸಲಹೆ ನೀಡಿದರು.
ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿದರು.
ಶಾಲೆಯು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ನಿರಂತರ ಸಾಧನೆ ಮಾಡಿದೆ. ಜೊತೆಗೆ ವಿದ್ಯಾರ್ಥಿಗಳು ಶಾಲೆಯ ಧ್ಯೇಯ ವಾಕ್ಯವಾದ ವೀರತೆ, ಧೃಡತೆ ಹಾಗೂ ಪ್ರಾಮಾಣಿಕತೆಯನ್ನು ಸದಾ ಪಾಲಿಸುವುದರೊಂದಿಗೆ, ಕ್ರೀಡಾ ಮೈದಾನದ ಒಳಗೂ ಹಾಗೂ ಹೊರಗೂ ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದರು.
ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಕ್ಯಾಪ್ಟನ್ ಯೋಗೇಶ, ಆಡಳಿತಾಧಿಕಾರಿ ವಿಂಗ್ ಕಮಾಂಡರ್, ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಷಾಜಿ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.