ಸಾವು
(ಪ್ರಾತಿನಿಧಿಕ ಚಿತ್ರ)
ಕುಶಾಲನಗರ: ತಾಲ್ಲೂಕಿನ ಶಿರಂಗಾಲ ಮಂಟಿಗಮ್ಮ ದೇವಾಲಯದ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರು.
ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತರು.
ಕೊಣನೂರು ಕಡೆಯಿಂದ ಕುಶಾಲನಗರದ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್ ನಡುವೆ ಅಪಘಾತವಾಗಿ ತೀವ್ರವಾಗಿ ಗಾಯಗೊಂಡು ಅಶೋಕ್ ಮೃತಪಟ್ಟರು.
ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್‌ಸ್ಪೆಕ್ಟರ್ ದಿನೇಶ್, ಸಂಚಾರಿ ಠಾಣಾಧಿಕಾರಿ ಶ್ರೀನಿವಾಸ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.