ADVERTISEMENT

ಕುಶಾಲನಗರ: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 15:56 IST
Last Updated 1 ಜೂನ್ 2025, 15:56 IST
ಕುಶಾಲನಗರ ಸಮೀಪದ ಹಾರಂಗಿ ಸಾಕಾನೆ ಶಿಬಿರ
ಕುಶಾಲನಗರ ಸಮೀಪದ ಹಾರಂಗಿ ಸಾಕಾನೆ ಶಿಬಿರ   

ಕುಶಾಲನಗರ: ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ದುಬಾರೆ ಸಾಕಾನೆ ಶಿಬಿರ, ಕಾವೇರಿ ನಿಸರ್ಗಧಾಮ, ಹಾರಂಗಿ ಸಾಕಾನೆ ಶಿಬಿರ ಪ್ರವಾಸಿ ತಾಣಗಳಲ್ಲಿ ಜೂನ್‌ನಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಮಡಿಕೇರಿ ಪ್ರಾದೇಶಿಕ ವಿಭಾಗದ ಕುಶಾಲನಗರ ವಲಯ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ.

ಪ್ರವಾಸಿ ತಾಣಗಳಲ್ಲಿರುವ ಸಾಕಾನೆಗಳು, ಜಿಂಕೆಗಳು ಇತರೆ ಪ್ರಾಣಿ ಪಕ್ಷಿಗಳಿಗೂ ಪ್ಲಾಸ್ಟಿಕ್ ಬಳಕೆಯಿಂದ ಹಾನಿ ಉಂಟಾಗುತ್ತಿದೆ. ಪ್ರವಾಸಿ ತಾಣಕ್ಕೆ ಬರುತ್ತಿರುವ ಪ್ರವಾಸಿಗರು ಎಲ್ಲೆಂದರಲ್ಲಿ ನೀರಿನ ಬಾಟಲಿ, ಪ್ಲಾಸ್ಟಿಕ್ ಕವರ್, ತಿನಿಸುಗಳ ಪಾಕೆಟ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಹಾಕುತ್ತಿರುವುದರಿಂದ ಪ್ರಾಣಿ, ಪಕ್ಷಿಗಳಿಗೆ ಹಾನಿಯಾಗುತ್ತಿದೆ. ಪ್ರವಾಸಿ ತಾಣದ ಸ್ವಚ್ಛತೆ ಹಾಳಾಗಿ ಸಾಕಾನೆ ಶಿಬಿರದಲ್ಲಿರುವ ಆನೆಗಳ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ.

ADVERTISEMENT

ಈ ಪ್ರವಾಸಿ ತಾಣಗಳಲ್ಲಿ ಜೂನ್‌ನಿಂದ ಜಾರಿಗೆ ಬರುವಂತೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿ ತಾಣಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದ್ದಲ್ಲಿ ₹ 100 ಮೊತ್ತವನ್ನು ದಂಡವಾಗಿ ವಿಧಿಸಲಾಗುವುದು ಎಂದು ಕುಶಾಲನಗರದ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.