ADVERTISEMENT

ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಶೇ 100 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:42 IST
Last Updated 11 ಜೂನ್ 2025, 13:42 IST
ಕುಶಾಲನಗರ ಸರ್ಕಾರಿ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಅಂತಿಮ ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು .
ಕುಶಾಲನಗರ ಸರ್ಕಾರಿ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಅಂತಿಮ ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು .   

ಕುಶಾಲನಗರ: ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ 2024-25ನೇ ಸಾಲಿನ ಅಂತಿಮ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ಕು ವಿಭಾಗದಲ್ಲಿಯೂ ಶೇ 100 ಫಲಿತಾಂಶ ಬಂದಿದೆ.

ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಪ್ರಾಚಾರ್ಯ ಡಾ.ಪರಶಿವಮೂರ್ತಿ, ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ವರ್ಗ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರ ಪರವಾಗಿ ಎಲ್ಲಾ ಅಂತಿಮ ವರ್ಷದ ವಿಧ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಎಲ್ಲಾ ವಿಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ನಾಲ್ಕು ವರ್ಷದ ಅಧ್ಯಯನದ ಪಯಣವನ್ನು ಸಂಭ್ರಮದಿಂದ ಆಚರಿಸಿದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎಸ್.ಸತೀಶ್ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು.

ADVERTISEMENT

‘2024-25ನೇ ಸಾಲಿನ ಅಂತಿಮ ವರ್ಷ ಪಾಸಾದ ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ವಿವಿಧ ಜಾಗತಿಕ ಕಂಪನಿಗಳಿಗೆ ನೇಮಕ ಹಾಗೂ ತರಬೇತಿಗೆ ಆಯ್ಕೆಯಾಗಿರುವುದು ಹರ್ಷದಾಯಕವಾಗಿದೆ. ಹಲವರು ಹೆಚ್ಚಿನ ವ್ಯಾಸಂಗಕ್ಕೆ ಇಚ್ಚಿಸಿದ್ದು ಕೆಸಿಇಟಿ ಪರೀಕ್ಷೆಗಳನ್ನು ಬರೆದಿದ್ದಾರೆ’ ಎಂದು ಉಪನ್ಯಾಸಕ ಜಿ.ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.