ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ (ಕೊಳವೆ ಬಾವಿ ಕೊರೆಯುವ) ಲಾರಿ ಸೋಮವಾರ ರಸ್ತೆ ಬದಿಯ ಕಿರು ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಪಾದಚಾರಿ ನಂಜುಂಡಸ್ವಾಮಿ, ಲಾರಿಯಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯ ಉಂಟಾಗಿದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಭೇಟಿ ನೀಡಿ
ಬೋರ್ ವೆಲ್ ಲಾರಿಯ ಡೀಸೆಲ್ ಸೋರಿಕೆಯಾಗಿ ಹರಿದ ಪರಿಣಾಮ ಬೆಂಕಿ ಅವಘಡ ತಪ್ಪಿಸಲು ಕ್ರಮಗೊಂಡು ಲಾರಿ ಮೇಲಕ್ಕೆತ್ತಿದರು. ಕುಶಾಲನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.