ಕುಶಾಲನಗರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಅವಮಾನಿಸಿದ ಘಟನೆ ಖಂಡಿಸಿ ವಿಶ್ವಜ್ಞಾನಿ ಅಂಬೇಡ್ಕರ್ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಐಬಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಧೀಶರನ್ನು ಅಪಮಾನಿಸಿದ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ದಲಿತ ಮುಖಂಡ ಮೋಹನ್ ಮೌರ್ಯ ಮಾತನಾಡಿ, ದೇಶದಲ್ಲಿ ನ್ಯಾಯಾಧೀಶರಿಗೆ ಅವಮಾನ ಕೃತ್ಯವೆಸಗಿದಾತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಟ್ರಸ್ಟ್ ಅಧ್ಯಕ್ಷ ಲೋಕೇಶ್ ಮಾತನಾಡಿ, ಮುಖ್ಯನಾಯಾಧೀಶರಿಗೆ ಅಪಮಾನ ಎಸಗಿರುವುದರ ವಿರುದ್ಧ ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟ್ರಸ್ಟ್ ಕಾರ್ಯದರ್ಶಿ ಸತೀಶ್ ಕುಮಾರ್, ಖಜಾಂಜಿ ಜ್ಞಾನವಾಣಿ ಸತೀಶ್, ನಿರ್ದೇಶಕರಾದ ಜೈವರ್ಧನ್, ಪ್ರಮುಖರಾದ ಎಚ್.ಡಿ.ಚಂದ್ರು,ಬಿ.ಡಿ.ಅಣ್ಣಯ್ಯ, ಸುರೇಶ್, ವೀರಭದ್ರ, ಶಿವಪ್ಪ, ಮಹೇಶ್, ರವಿ, ಎಸ್.ಆರ್.ಮಂಜುನಾಥ್ , ಕೃಷ್ಣ, ಗೋವಿಂದರಾಜ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.