ADVERTISEMENT

ಕುಶಾಲನಗರ: ವೀರಶೈವ ಮಹಾಸಭಾದಿಂದ ಶಾಮನೂರು ಸ್ಮರಣೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 7:22 IST
Last Updated 16 ಡಿಸೆಂಬರ್ 2025, 7:22 IST
ಕುಶಾಲನಗರ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಕುಶಾಲನಗರ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಕುಶಾಲನಗರ: ‘ನಾಡು ಕಂಡ ಅಪರೂಪದ ರಾಜಕಾರಣಿ, ಶಿಕ್ಷಣ ಪ್ರೇಮಿ, ಸಂಘಟಕ, ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ಇಡೀ ನಾಡಿಗೆ ತುಂಬಲಾರದ ನಷ್ಟ’ ಎಂದು ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ವಿಷಾದಿಸಿದರು.

ಇಲ್ಲಿನ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶಾಮನೂರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ದಾವಣಗೆರೆ ಜಿಲ್ಲೆಯ ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಲ್ಲದೇ 50ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಹಸ್ರ ಮಂದಿಗೆ ಬೆಳಕಾದವರು. ವೀರಶೈವ ಸಮಾಜವನ್ನು ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿಸಿ ಸಮಾಜದ ಪ್ರಶ್ನಾತೀತ ನಾಯಕರಾಗಿದ್ದರು’ ಎಂದು ಸ್ಮರಿಸಿದರು.

ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಭಶಿವಯ್ಯ ಮಾತನಾಡಿ, ‘ವೀರಶೈವ ಸಮಾಜದಲ್ಲಿ ಗುಂಪುಗಳಾಗದಂತೆ ಎಚ್ಚರಿಕೆ ವಹಿಸಿ ಇಳಿ ವಯಸ್ಸನ್ನೂ ಲೆಕ್ಕಿಸದೇ ದಾವಣಗೆರೆಯಲ್ಲಿ ಪಂಚಪೀಠಗಳ ಶ್ರೀಗಳನ್ನು ಒಂದೆಡೆ ಸೇರಿಸಿ ನಡೆಸಿದ ಬೃಹತ್ ಸಮಾವೇಶ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ’ ಎಂದರು.

ADVERTISEMENT

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ‘ದಾವಣಗೆರೆ ಜಿಲ್ಲೆಯ ಅಜ್ಜಾ ಎಂದೇ ಖ್ಯಾತರಾಗಿದ್ದ ಶಾಮನೂರರ ಶೈಕ್ಷಣಿಕ, ಔದ್ಯೋಗಿಕ ಕ್ರಾಂತಿ ಅವಿಸ್ಮರಣೀಯ’ ಎಂದರು.

ವೀರಶೈವ ಸಮಾಜದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೀಪಿಕಾ ಕರುಣ, ವೀರಶೈವ ಸಮಾಜದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ನಂದೀಶ್, ಕುಶಾಲನಗರ ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎಂ.ಮಧುಸೂದನ್, ಕಾರ್ಯದರ್ಶಿ ಧರ್ಮೇಂದ್ರ, ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್, ಪ್ರಮುಖರಾದ ಮನುದೇವಿ, ಲೇಖನಾ ಧರ್ಮೇಂದ್ರ, ಮಮತಾ ರವೀಶ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಬಿ.ನಟರಾಜು, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿ.ಸಿ.ಅಮೃತ್, ಬಸವೇಶ್ವರ ಸಹಕಾರ ಸಂಘದ ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಸಿಇಒ ಬಸವಣ್ಣಯ್ಯ, ದಯಾನಂದ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.