ಕುಶಾಲನಗರ: ಕೃಷಿ ಇಲಾಖೆ ಸಹಾಯಧನದಲ್ಲಿ ನೀಡಿದ ಕೃಷಿ ಯಂತ್ರೋಪಕರಣಗಳನ್ನು ಶಾಸಕ ಡಾ. ಮಂತರ್ ಗೌಡ ಈಚೆಗೆ ತಾಲ್ಲೂಕು ವ್ಯಾಪ್ತಿಯ ರೈತರಿಗೆ ವಿತರಣೆ ಮಾಡಿದರು.
ಇಲ್ಲಿನ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರು ಉದ್ಯೋಗ ಅರಸಿ ನಗರ ಪ್ರದೇಶಗಳಲ್ಲಿ ಅಲೆದಾಡುವ ಬದಲು ಕೃಷಿಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಅಧುನಿಕ ತಂತ್ರಜ್ಞಾನದೊಂದಿಗೆ ಬೇಸಾಯ ಮಾಡಲು ವಿವಿಧ ಯಂತ್ರೋಪಕರಣಗಳನ್ನು ಕೃಷಿ ಇಲಾಖೆ ಸಹಾಯಧನದಲ್ಲಿ ನೀಡುತ್ತಿದ್ದು, ರೈತರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಮಡಿಕೇರಿ ಕೃಷಿ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಿ. ಎಸ್. ಸೋಮಶೇಖರ್, ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ ವೀರಣ್ಣ, ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಸ್ವರ್ಣ, ರೈತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.