ಕುಶಾಲನಗರ: ಸಮೀಪದ ಹೆಬ್ಬಾಲೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗುವ ರಸ್ತೆಯಲ್ಲಿ ಗಿಡಗಂಟಿಗಳು ಬೆಳೆದು ಸಂಪೂರ್ಣ ರಸ್ತೆ ಆವರಿಸಿಕೊಂಡಿದ್ದು, ವಾಹನ ಸಂಚಾರಕ್ಕೆ ತುಂಬ ತೊಂದರೆ ಉಂಟಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ಹಾಗೂ ಜಮೀನಿಗೆ ಹೋಗುವ ರೈತರಿಗೂ ಇದರಿಂದ ತೊಂದರೆಯಾಗಿದೆ. ರಸ್ತೆಯ ಉದ್ದಕ್ಕೂ ಎರಡು ಕಡೆಗಳಲ್ಲಿ ಗಿಂಡಗಂಟಿಗಳು ಎತ್ತರಕ್ಕೆ ಬೆಳೆದು ರಸ್ತೆ ಕಾಣದಂತೆ ಆವರಿಸಿವೆ. ಡಾಂಬರ್ ರಸ್ತೆ ಕಾಲುದಾರಿಯ ರಸ್ತೆಯಂತೆ ಆಗಿದೆ. ಆಸ್ಪತ್ರೆಗೆ ಹೋಗುವ ರಸ್ತೆ ಈ ರೀತಿ ಅವ್ಯವಸ್ಥೆಯಿಂದ ಕೂಡಿದ್ದು, ಅಪಾಯ ಆಹ್ವಾನಿಸುತ್ತಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರಾದ ರಮೇಶ್ ಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಂಚಿನಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.