ADVERTISEMENT

ಹಾರಂಗಿ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ನಿರಂತರ ಮಳೆ ಶಾಸಕರಿಂದ ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 26 ಮೇ 2025, 3:51 IST
Last Updated 26 ಮೇ 2025, 3:51 IST
ಕುಶಾಲನಗರ ಸಮೀಪದ ಹಾರಂಗಿಯಲ್ಲಿ ಶಾಸಕ ಡಾ.ಮಂತರ್ ಗೌಡ  ಕಂದಾಯ ಹಾಗೂ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಕುಶಾಲನಗರ ಸಮೀಪದ ಹಾರಂಗಿಯಲ್ಲಿ ಶಾಸಕ ಡಾ.ಮಂತರ್ ಗೌಡ  ಕಂದಾಯ ಹಾಗೂ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.   

ಕುಶಾಲನಗರ: ಕಾವೇರಿ ಹಾಗೂ ಹಾರಂಗಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶಾಸಕ ಡಾ.ಮಂತರ್ ಗೌಡ ನೀರಾವರಿ ಹಾಗೂ ಕಂದಾಯ ಅಧಿಕಾರಿಗಳ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ಹಾರಂಗಿಯಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದರು. ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಲು ಸೂಚಿಸಿದರು. ಕಂದಾಯ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT