
ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಸಂಭ್ರಮ ಅಭಿಯಾನದಲ್ಲಿ ಬೇವಿನ ಗಿಡ ನೀಡಲಾಯಿತು.
ಕುಶಾಲನಗರ: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂಭ್ರಮ, ನಮ್ಮನಡೆ ಪರಿಸರದೆಡೆಗೆ, ಗೋ ಗ್ರೀನ್ ಅಭಿಯಾನಕ್ಕೆ ಚಾಲನೆ
ನೀಡಲಾಯಿತು.
ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು
ಎಂದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ
ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ. ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ,ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.
ಪ್ರತಿಜ್ಞೆ ಸ್ವೀಕಾರ: ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.