
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಜಾಥಾ ನಡೆಸಿದರು.
ಹಳೆಯ ಬಸ್ ನಿಲ್ದಾಣದಿಂದ ಹೊರಟ ಜಾಥಾ ಗಾಂಧಿ ಮೈದಾನ ತಲುಪಿತು.
ಅಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.