ADVERTISEMENT

ಕಾರ್ಗಿಲ್ ಹುತಾತ್ಮರಿಗೆ ದೀಪ, ಗಾನ, ಪುಷ್ಪನಮನ ಇಂದು

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 5:47 IST
Last Updated 26 ಜುಲೈ 2025, 5:47 IST

ಮಡಿಕೇರಿ: ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಜುಲೈ 26ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಇಲ್ಲಿನ ಗೌಡ ಸಮಾಜದಲ್ಲಿ ನಡೆಯುವ ಕಾರ್ಗಿಲ್ ಹುತಾತ್ಮರಿಗೆ ದೀಪನಮನ, ಗಾನನಮನ ಮತ್ತು ಪುಷ್ಪ ನಮನದಲ್ಲಿ ಜಿಲ್ಲೆಯ 85 ಸಂಘ–ಸಂಸ್ಥೆಗಳು ಪಾಲ್ಗೊಳ್ಳಲಿವೆ.

ರೋಟರಿ ಮಿಸ್ಟಿ ಹಿಲ್ಸ್, ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಪಾವನ ಇವೆಂಟ್ಸ್‌ನಿಂದ ದೇಶಭಕ್ತಿ ಗೀತೆ ಕಾರ್ಯಕ್ರಮವೂ ನಡೆಯಲಿದೆ ಎಂದುಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್ ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT