ADVERTISEMENT

ಜಮೀನು ಗುತ್ತಿಗೆ: ಅರ್ಜಿ ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:48 IST
Last Updated 13 ಜೂನ್ 2025, 15:48 IST

ಸೋಮವಾರಪೇಟೆ: 2005ರ ಜನವರಿಗಿಂತಲೂ ಮೊದಲು ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಯುತ್ತಿರುವವರಿಗೆ, ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಸಂಬಂಧ ಅರ್ಜಿ ಸ್ವೀಕರಿಸುವ ಕಾಲಾವಕಾಶವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಜಮೀನು ಗುತ್ತಿಗೆ ಯೋಜನೆಯಡಿ ಅರ್ಜಿ ಸಲ್ಲಿಸಲು ಬಯಸುವವರು ನಮೂನೆ-9, ಕುಟುಂಬದವರ ಪಾನ್ ಹಾಗೂ ಆಧಾರ್ ಕಾರ್ಡ್, 5 ವರ್ಷಗಳ ಆದಾಯ ತೆರಿಗೆ ಮಾಹಿತಿ, ವಂಶವೃಕ್ಷ, ಪ್ಲಾಂಟೇಷನ್ ಮಾಡಿರುವ ಸ.ನಂ. ಪಹಣಿ ಸಹಿತ ತಾಲ್ಲೂಕು ಕಚೇರಿಯಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT