ADVERTISEMENT

ಮಡಿಕೇರಿ- ಮಂಗಳೂರು ರಸ್ತೆಯ ಗುಡ್ಡದಲ್ಲಿ ದೊಡ್ಡ ಬಿರುಕು; ಆತಂಕ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 9:02 IST
Last Updated 9 ಆಗಸ್ಟ್ 2022, 9:02 IST
ಮಡಿಕೇರಿ- ಮಂಗಳೂರು ರಸ್ತೆಯ ಗುಡ್ಡದಲ್ಲಿ ದೊಡ್ಡ ಬಿರುಕು; ಆತಂಕ
ಮಡಿಕೇರಿ- ಮಂಗಳೂರು ರಸ್ತೆಯ ಗುಡ್ಡದಲ್ಲಿ ದೊಡ್ಡ ಬಿರುಕು; ಆತಂಕ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರ ಮಳೆ ಮುಂದುವರಿದಿದೆ. ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ಮಂಗಳವಾರ ಗುಡ್ಡದಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಇಲ್ಲಿ ರಸ್ತೆ ಬದಿಯಲ್ಲಿ ಉದ್ದಕ್ಕೂ ವಿದ್ಯುತ್ ಕಂಬಗಳಿದ್ದು, ಒಂದು ವೇಳೆ ಮಣ್ಣು ಕುಸಿದು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದರೆ ಭಾರಿ ಅನಾಹುತವೇ ಸಂಭವಿಸಲಿದೆ.

ಗಾಳಿಯ ಅಬ್ಬರಕ್ಕೆ ವಿದ್ಯುತ್ ಕಂಬಗಳು ಧರೆಗೆ ವೇಗವಾಗಿ ಬೀಸುತ್ತಿರುವ ಗಾಳಿಗೆ ಅನೇಕ ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ವಿರಾಜಪೇಟೆಯ ಚಿಕ್ಕಪೇಟೆ ಸಮೀಪ ಹಲವು ವಿದ್ಯುತ್ ಕಂಬಗಳು ಉರುಳಿವೆ. ಮಳೆಗಿಂತ ಗಾಳಿಯ ಅಬ್ಬರವೇ ಅನೇಕ ಕಡೆ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.