ADVERTISEMENT

ಸಿದ್ದಾಪುರ: ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 6:15 IST
Last Updated 17 ಜುಲೈ 2025, 6:15 IST
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಂಗವಾಗಿ ನೆಲ್ಯಹುದಿಕೇರಿಯ ಮನೆಗಳಿಗೆ ತೆರಳಿ ಅರಿವು ಮೂಡಿಸಲಾಯಿತು
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಂಗವಾಗಿ ನೆಲ್ಯಹುದಿಕೇರಿಯ ಮನೆಗಳಿಗೆ ತೆರಳಿ ಅರಿವು ಮೂಡಿಸಲಾಯಿತು   

ಸಿದ್ದಾಪುರ: ನೆಲ್ಯಹುದಿಕೇರಿಯ ಎಂ.ಜಿ ಕಾಲೊನಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಠಾಣಾಧಿಕಾರಿ ಮಂಜುನಾಥ್ ಚಾಲನೆ ನೀಡಿದರು.

ರಾಜ್ಯ ಸರ್ಕಾರದ ವಿನೂತನ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಮನೆಗಳಿಗೆ ತೆರಳಿ ಸೇವೆಗಳ ಬಗ್ಗೆ ಜನರಿಗೆ ವಿವರಿಸಿದರು. ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೊ ಕಾಯ್ದೆ, ಕಳವು, ರಸ್ತೆ ಸಂಚಾರ ನಿಯಮ ಸೇರಿದಂತೆ ವಿವಿಧ ವಿಷಯದ ಬಗ್ಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭ ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾದ ಧನಲಕ್ಷ್ಮಿ, ಉಪಾಧ್ಯಕ್ಷರಾದ ಪ್ರಮೀಳಾ, ಗ್ರಾ.ಪಂ ಸದಸ್ಯರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.