ADVERTISEMENT

ಕೊಡಗು: ಮತ್ತೆ ಭಾರಿ ಮಳೆ ಮುನ್ಸೂಚನೆ; ಶಾಲಾ, ಕಾಲೇಜುಗಳಿಗೆ ಗುರುವಾರ ರಜೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 10:37 IST
Last Updated 6 ಜುಲೈ 2022, 10:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದ್ದರೂ ಗುರುವಾರ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿ, ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಿದೆ.

ಬುಧವಾರವೂ ಜಿಲ್ಲಾಡಳಿತ ರಜೆ‌ ನೀಡಿತ್ತು. ಕಂದಾಯ ಸಚಿವ ಆರ್.ಅಶೋಕ್ ಅವರು ಬುಧವಾರ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT