ADVERTISEMENT

ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 13 ಮೇ 2025, 7:16 IST
Last Updated 13 ಮೇ 2025, 7:16 IST

ಶನಿವಾರಸಂತೆ: ಇಲ್ಲಿನ ಹುಲುಕೋಡು ಗ್ರಾಮದ ತೋಟವೊಂದರಲ್ಲಿ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿದೆ.

ಸುಮಾರು 12 ವರ್ಷ ವಯಸ್ಸಿನ ಚಿರತೆಯು ಐದಾರು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಸ್ಥಳಕ್ಕೆ ಶನಿವಾರಸಂತೆ ಆರ್‌ಎಫ್‍ಒ ಪೂಜಾಶ್ರೀ, ಇಲಾಖೆ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದರು. ಶನಿವಾರಸಂತೆ ಪಶುವೈದ್ಯಾಧಿಕಾರಿ ಡಾ.ಸತೀಶ್ ಚಿರತೆಯ ಶವದ ಮರಣೋತ್ತರ ಪರೀಕ್ಷೆ ನಡೆಸಿದರು.

ಈ ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ಚಿರತೆಯೊಂದರ ಸಂಚಾರ ಇತ್ತು. ಅದೇ ಚಿರತೆ ಉರುಳಿಗೆ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.