ADVERTISEMENT

ಚಿರತೆ ಚರ್ಮ ಮಾರಾಟಕ್ಕೆ ಯತ್ನ: ಬಂಧನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:39 IST
Last Updated 3 ಡಿಸೆಂಬರ್ 2020, 14:39 IST
ಚಿರತೆ ಚರ್ಮವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿರುವುದು
ಚಿರತೆ ಚರ್ಮವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿರುವುದು   

ವಿರಾಜಪೇಟೆ: ಸಮೀಪದ ಐಮಂಗಲ ಗ್ರಾಮದ ಬಳಿ ಬುಧವಾರ ಸಂಜೆ ಚಿರತೆ ಚರ್ಮವನ್ನು ಅಕ್ರಮವಾಗಿ ಮಾರಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿ, ಚಿರತೆ ಚರ್ಮವನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಬಳಿ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಿದಾಗ ಎರಡು ಚಿರತೆಯ ಚರ್ಮಗಳು ಪತ್ತೆಯಾಗಿವೆ.

‘ಸುಂಟಿಕೊಪ್ಪದ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ರಷೀದ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಾಹಿತಿ ನೀಡಿದರು.

ADVERTISEMENT

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪರಾರಿ ಆಗಿರುವ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ಅಧೀಕ್ಷಕ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕಿ ವೀಣಾ ನಾಯಕ್, ಸಿಬ್ಬಂದಿಗಳಾದ ಕೆ.ಬಿ.ಸೋಮಣ್ಣ, ಟಿ.ಪಿ. ಮಂಜುನಾಥ್, ಪಿ.ಬಿ. ಮೊಣ್ಣಪ್ಪ, ಎಸ್.ಎಂ. ಯೋಗೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.