ADVERTISEMENT

ಸೋಮವಾರಪೇಟೆ: ಲೋಕಾಯುಕ್ತ ಅಧಿಕಾರಿಗಳ ಕುಂದುಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 3:54 IST
Last Updated 15 ಜನವರಿ 2026, 3:54 IST
ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ಡಿವೈಎಸ್ ಪಿ ದಿನಕರಶೆಟ್ಟಿ ಮಾತನಾಡಿದರು. 
ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ಡಿವೈಎಸ್ ಪಿ ದಿನಕರಶೆಟ್ಟಿ ಮಾತನಾಡಿದರು.    

ಸೋಮವಾರಪೇಟೆ: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ,  ಅವರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಲೋಕಾಯುಕ್ತ ಡಿವೈಎಸ್‌ಪಿ ದಿನಕರಶೆಟ್ಟಿ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಅಧಿಕರಿಗಳ ನೇತೃತ್ವದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು  ಮಾತನಾಡಿದರು. ಸಾರ್ವಜನಿಕರ ಕೆಲಸಗಳನ್ನು ಸರ್ಕಾರಿ ನೌಕರರು ನಿಗದಿತ ಸಮಯದಲ್ಲಿ ಮಾಡಿಕೊಡಬೇಕು. ಕೆಲವರು ಲಿಖಿತ ದೂರುಗಳನ್ನು ಸಲ್ಲಿಸಿದ್ದಾರೆ. ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

 ವಿವಿಧ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಿದರು. ಜಾಗದ ದುರಸ್ತಿ, ಪೋಡಿ ಕೆಲಸ ಕಾರ್ಯಗಳ ವಿಳಂಬದ ಬಗ್ಗೆ ದೂರುಗಳನ್ನು ಸಲ್ಲಿಸಲಾಯಿತು. ಲೋಕಾಯುಕ್ತ ಇನ್‌ಸ್ಪೆಕ್ಟರ್ ವೀಣಾ ನಾಯಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ , ಅಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.