ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಮಡಿಕೇರಿ: ಇಲ್ಲಿನ ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ ಅವರ ಇಲ್ಲಿನ ವಸತಿ ಗೃಹ ಹಾಗೂ ಮೈಸೂರಿನ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದರೊಂದಿಗೆ ಮೈಸೂರಿನ ಹೂಟಗಳ್ಳಿ ನಗರಸಭೆಯ ಕಂದಾಯ ನಿರೀಕ್ಷಕ ರಾಮಸ್ವಾಮಿ ಅವರ ತಿ.ನರಸೀಪುರದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೈಸೂರು ವಿಭಾಗದ ಲೋಕಾಯುಕ್ತ ಎಸ್.ಪಿ.ಉದೇಶ್, ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ, ಇನ್ ಸ್ಪೆಕ್ಟರ್ ವೀಣಾ ನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.