ADVERTISEMENT

ಮಡಿಕೇರಿ: ಲೋಕಾಯುಕ್ತ ಪೊಲೀಸ್‌ ಬಲೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 0:17 IST
Last Updated 9 ಅಕ್ಟೋಬರ್ 2025, 0:17 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಹಿರೇಶ್ ₹25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದರು.

ADVERTISEMENT

‘ಗುತ್ತಿಗೆದಾರರೊಬ್ಬರಿಗೆ ₹14 ಲಕ್ಷ ಬಿಲ್ ಮಂಜೂರು ಮಾಡಲು ಸುಧಾ ₹25 ಸಾವಿರ ಲಂಚ ಕೇಳಿದ್ದರು. ಲಂಚದ ಹಣ ಪಡೆಯುವಾಗ ಅವರನ್ನು ವಶಕ್ಕೆ ಪಡೆಯಲಾಯಿತು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. 

ಮೈಸೂರು ವಿಭಾಗದ ಲೋಕಾಯುಕ್ತ ಎಸ್‌ಪಿ. ಉದೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ದಿನಕರಶೆಟ್ಟಿ, ಇನ್‌ಸ್ಪೆಕ್ಟರ್‌ಗಳಾದ ಲೋಕೇಶ್, ವೀಣಾನಾಯಕ ಕಾರ್ಯಾಚರಣೆ ಕೈಗೊಂಡಿದ್ದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.