
ಪ್ರಜಾವಾಣಿ ವಾರ್ತೆಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಮಡಿಕೇರಿ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರಿಗೆ ಸೇರಿದ್ದು ಎನ್ನಲಾದ ಸ್ಥಳಗಳ ಮೇಲೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದರು.
ತಾಲ್ಲೂಕಿನ ಕಾಡಂಚಿನ ಗ್ರಾಮ ವಣಚಲು ಸಮೀಪ ಇರುವ ತೋಟ ಹಾಗೂ ನಿರ್ಮಾಣ ಹಂತದ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಮಾತ್ರವೇ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಕುರಿತು ನಮಗೆ ಯಾವುದೇ ವಿವರಗಳು ಸಿಕ್ಕಿಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.