ADVERTISEMENT

ಸುಂಟಿಕೊಪ್ಪ: ಲಾರಿ- ಕಾರು ಡಿಕ್ಕಿ; ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 3:19 IST
Last Updated 2 ಸೆಪ್ಟೆಂಬರ್ 2024, 3:19 IST
ಸುಂಟಿಕೊಪ್ಪ ಸಮೀಪದ ಐಗೂರು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತು ಕಾರು  ನಜ್ಜುಗುಜ್ಜಾಗಿರುವುದು
ಸುಂಟಿಕೊಪ್ಪ ಸಮೀಪದ ಐಗೂರು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತು ಕಾರು  ನಜ್ಜುಗುಜ್ಜಾಗಿರುವುದು   

ಸುಂಟಿಕೊಪ್ಪ: ಸಮೀಪದ ಮಾದಾಪುರ ರಾಜ್ಯ ಹೆದ್ದಾರಿಯ ಐಗೂರಿನ ಬಳಿ ಕಾರು ಹಾಗೂ ಮಿನಿಲಾರಿ ನಡುವೆ ಡಿಕ್ಕಿ ಸಂಭವಿಸಿ‌ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರಪೇಟೆ ಕಡೆಯಿಂದ ಮಾದಾಪುರ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಸೋಮವಾರ ಪೇಟೆ ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿಯ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿ ಚಾಲಕನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ಚಾಲಕ ಸೇರಿದಂತೆ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಸ್ಥಳಕ್ಕೆ ಮಾದಾಪುರ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.