ADVERTISEMENT

ಮಾದಾಪಟ್ಟಣ: ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 6:40 IST
Last Updated 1 ಜನವರಿ 2026, 6:40 IST
ಕುಶಾಲನಗರ ಸಮೀಪದ ಮಾದಾಪಟ್ಟಣ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ತಮ್ಮ ಶಿಕ್ಷಕರನ್ನು ಸನ್ಮಾನಿಸಿದರು
ಕುಶಾಲನಗರ ಸಮೀಪದ ಮಾದಾಪಟ್ಟಣ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ತಮ್ಮ ಶಿಕ್ಷಕರನ್ನು ಸನ್ಮಾನಿಸಿದರು   

ಕುಶಾಲನಗರ: ಮಾದಾಪಟ್ಟಣ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.

ಗ್ರಾಮದ ರಂಗಮಂದಿರದಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಗುರುವಂದನೆಯಲ್ಲಿ ವಯೋ ನಿವೃತ್ತಿ ಹೊಂದಿದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಎಚ್. ಆರ್. ರಾಜು ಹಾಗೂ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಇತರೆಡೆಗೆ ತೆರಳಿರುವ ಹಿರಿಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷ ಪ್ರವೀಣ್ ಕುಶಾಲಪ್ಪ, ಸದಸ್ಯ ಶಿವಪ್ಪ, ಹಳೆ ವಿದ್ಯಾರ್ಥಿ ಸಂಘದ ಮಂಜುನಾಥ್, ವೆಂಕಟೇಶ್, ಉದಯ, ಹರಿನಾರಾಯಣ, ಗಜೇಂದ್ರ, ಚಂದ್ರು, ಲೋಕೇಶ್, ಚಂದ್ರು, ಎಂ.ಆರ್.ಹರೀಶ್, ಎಂ.ಪಿ.ಸಿದ್ದರಾಜು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.