ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲದ ಕುಟ್ಟ- ಮಡಿಕೇರಿ ರಸ್ತೆ ಕುಸಿದಿರುವ ಪ್ರದೇಶವನ್ನು ಬೀಳುತ್ತಿದ್ದ ಮಳೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಡಾ.ಮಂತರ್ ಗೌಡ,
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇದ್ದರು.
ಇದಕ್ಕೂ ಮುನ್ನ ರಸ್ತೆ ಕುಸಿತದ ಪಕ್ಕದಲ್ಲೇ ಇರುವ ಮೂರುಎಕ್ರೆ ಪೈಸಾರಿ ಪ್ರದೇಶದ ಜನರು ಉತ್ತಮ ರಸ್ತೆ ಹಾಗೂ ಹರಿಯುವ ತೋಡಿಗೆ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.