ADVERTISEMENT

ಮಡಿಕೇರಿ ದಸರಾ ಕಬಡ್ಡಿಗೆ ಚಾಲನೆ: ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 3:08 IST
Last Updated 13 ಅಕ್ಟೋಬರ್ 2025, 3:08 IST
<div class="paragraphs"><p>ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಭಾಗಿಯಾಗಿದ್ದ ಪತ್ರಕರ್ತರ ಮತ್ತು ದಸರಾ ಕ್ರೀಡಾಸಮಿತಿ ತಂಡದೊಂದಿಗೆ ಡಾ.ಮಂತರ್‌ಗೌಡ, ಎ.ಎಸ್.ಪೊನ್ನಣ್ಣ, ಪ್ರದೀಪ್ ಕರ್ಕೆರ ಇದ್ದಾರೆ</p></div>

ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಭಾಗಿಯಾಗಿದ್ದ ಪತ್ರಕರ್ತರ ಮತ್ತು ದಸರಾ ಕ್ರೀಡಾಸಮಿತಿ ತಂಡದೊಂದಿಗೆ ಡಾ.ಮಂತರ್‌ಗೌಡ, ಎ.ಎಸ್.ಪೊನ್ನಣ್ಣ, ಪ್ರದೀಪ್ ಕರ್ಕೆರ ಇದ್ದಾರೆ

   

ಮಡಿಕೇರಿ: ಇಲ್ಲಿನ ಗಾಂಧಿ ಮೈದಾನದಲ್ಲಿ ಭಾನುವಾರ ಮಡಿಕೇರಿ ನಗರ ದಸರಾ ಸಮಿತಿ ಮತ್ತು ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮತ್ತು ಶಾಸಕ ಡಾ.ಮಂತರ್‌ಗೌಡ ಅವರು ಮೊದಲ ‘ರೈಡ್’ ಹೋಗುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಎ.ಎಸ್.ಪೊನ್ನಣ್ಣ ಮಾತನಾಡಿ, ‘ಜಿಲ್ಲೆಯಲ್ಲಿ ಕ್ರೀಡೆಯನ್ನು ಬೆಳೆಸಲು ಹಲವಾರು ಸಂಘಸಂಸ್ಥೆಗಳು ಕ್ರೀಡಾಕೂಟಗಳನ್ನು ನಡೆಸುತ್ತಿದ್ದು, ಇದು ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ’ ಎಂದರು.

ADVERTISEMENT

ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ‘ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಆಟಗಾರರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದು ಹೇಳಿದರು.

ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಮಾತನಾಡಿ, ‘ಈ ಹಿಂದೆ ಹೆಚ್ಚಿನ ಮಳೆಯಿಂದ ಕಬಡ್ಡಿ ಪಂದ್ಯಾವಳಿಯನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಈಗ ಆಯೋಜಿಸಲಾಗಿದೆ’ ಎಂದರು.

ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ.ಬಿ.ಅಯ್ಯಪ್ಪ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಯುವ ದಸರಾ ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ, ಕೋಟೆ ಮಹಾಗಣಪತಿ ದೇವಾಲಯ ದಶಮಂಟಪ ಸಮಿತಿ ಅಧ್ಯಕ್ಷ ಹರೀಶ್ ಅನ್ವೇಕರ್, ಮಾಜಿ ಎಂಎಲ್‌ಸಿ ವೀಣಾಅಚ್ಚಯ್ಯ ದಸರಾ ಕ್ರೀಡಾ ಸಮಿತಿ ಉಪಾಧ್ಯಕ್ಷ ಕೆ.ಆರ್.ದಿನೇಶ್, ಗೌರವಾಧ್ಯಕ್ಷ ಕೆ.ಆರ್.ರವಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.