ಮಡಿಕೇರಿ: ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ವೈಜ್ಞಾನಿಕವಾದ ಕನಿಷ್ಠ ವೇತನ ನೀಡಬೇಕು ಎಂದು ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಭರತ್, ‘ಗ್ರಾಮ ಪಂಚಾಯಿತಿ ನೌಕರರನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮಾಡುವ ಕೆಲಸಕ್ಕೆ ಸಮರ್ಪಕವಾದ ವೇತನ ನೀಡುತ್ತಿಲ್ಲ. ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಅವರು ಬದುಕು ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಅವರಿಗೆ ಸಮರ್ಪಕವಾದ ವೈಜ್ಞಾನಿಕವಾದ ಸಂಬಳ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಮುಖಂಡರಾದ ಮಹದೇವ್, ದಿಲೀಪ್ ಟಿ.ಕೆ.ಮೂರ್ತಿ, ಶಿವಭಾಗ್ಯ, ಮಹಾಲಿಂಗ, ಸೌಮ್ಯಾ, ಕೆ.ಬಿ.ಸತೀಶ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.