ಮಡಿಕೇರಿ: ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಕೆ.ಜಿ.ಬೋಪಯ್ಯ ಶನಿವಾರ ಉದ್ಘಾಟಿಸಿದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ವಿಜಯ್ ಪೂಣಚ್ಚ ತಂಬಂಡ ವಹಿಸಿದ್ದಾರೆ.
ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗೆ ಸ್ಪಂದಿಸಿದ ಶಾಸಕ ಕೆ.ಜಿ.ಬೋಪಯ್ಯ ಈಗಾಗಲೇ ಕೊಡವ ಭಾಷೆ ಅಕಾಡೆಮಿ ಹಾಗೂ ಅರೆಭಾಷೆ ಅಕಾಡೆಮಿ ಇದೆ. ನಮ್ಮ ಕೊಡಗಿನ ಸಂಸ್ಕೃತಿ ಉಳಿಸಿರುವ ಬುಡಕಟ್ಟು ಜನರ ಅಭ್ಯುದಯಕ್ಕೆ ಅಕಾಡೆಮಿ ಸ್ಥಾಪಿಸಬೇಕು. ಈ ಬೇಡಿಕೆಯನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.