
ಮಡಿಕೇರಿ: ಕೊಡವರ ನೈಜ ಚರಿತ್ರೆಯನ್ನು ತಿರುಚುವವರ ವಿರುದ್ಧ ಜಾಗೃತರಾಗಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು.
ಸಿಎನ್‌ಸಿ ವತಿಯಿಂದ ಭಾಗಮಂಡಲದಲ್ಲಿ ನಡೆದ ಗುರುವಾರ ನಡೆದ 23ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಗ ಕೊಡಗು ಹಾಗೂ ಈ ದೇಶಕ್ಕೆ ಕೊಡವರ ಕಾಣಿಕೆ ಏನೇನೂ ಇಲ್ಲ ಎಂದು ಪ್ರತಿಬಿಂಬಿಸುವ ಮೂಲಕ ಕೊಡವರನ್ನು ಖಳನಾಯಕರಂತೆ ತೋರಿಸುವ ಕ್ರೂರ ಹುನ್ನಾರ ನಡೆದಿದ್ದು, ಇದರ ವಿರುದ್ಧ ತೀವ್ರ ನಿಗಾ ಇರಿಸಬೇಕು ಎಂದು ಹೇಳಿದರು.
ಕೊಡವ ಲ್ಯಾಂಡ್‌ಗಾಗಿ ಒತ್ತಾಯಿಸಿ ಮತ್ತು ಕೊಡವರ ಕುರಿತು ಸುಳ್ಳು ಚರಿತ್ರೆ ಸೃಷ್ಟಿಯ ವಿರುದ್ಧ ಜನಜಾಗೃತಿ ಮೂಡಿಸಲು ಇದೇ ತಿಂಗಳಿನಿಂದ ಜಿಲ್ಲೆಯಾದ್ಯಂತ ಅಭಿಯಾನ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.
ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ ಕೊಡವ ಸಮುದಾಯವನ್ನು ಸಂರಕ್ಷಿಸಬೇಕು, ಶಾಸ್ತ್ರೀಯವು, ಸಮೃದ್ಧವು, ಶ್ರೀಮಂತವು ಹಾಗೂ ಪ್ರಾಚೀನವಾದ ಕೊಡವರ ಮಾತೃಭಾಷೆಯಾದ ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸಬೇಕು, ಕೊಡವ ತಕ್ಕನ್ನು ಆಡಳಿತಾಂಗ ಮತ್ತು ಪಠ್ಯ ಕ್ರಮದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿದರು.
2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣ ಮಾಡಬೇಕು ಎಂದು ಮನವಿ ಮಾಡಿದರು.
ಇಲ್ಲಿಯವರೆಗೆ ಬಿರುನಾಣಿ, ಟಿ.ಶೆಟ್ಟಿಗೇರಿ, ಕಡಂಗ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ಮಾದಾಪುರ, ಸುಂಟಿಕೊಪ್ಪ, ಸಿದ್ದಾಪುರ, ನಾಪೋಕ್ಲು, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು, ಚೇರಂಬಾಣೆ, ಚೆಟ್ಟಳ್ಳಿ, ಅಮ್ಮತ್ತಿ, ಶ್ರೀಮಂಗಲ, ಬುಟ್ಟಂಗಾಲ, ಹುದಿಕೇರಿ, ಕುಟ್ಟದಲ್ಲಿ, ಪಾಲಿಬೆಟ್ಟ, ತಿತಿಮತಿ, ಭಾಗಮಂಡಲದಲ್ಲಿ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು.
ಕಲಿಯಂಡ ಮೀನಾ ಪ್ರಕಾಶ್, ಲೆಫ್ಟಿನೆಂಟ್ ಕರ್ನಲ್ ಬಿ.ಎಂ ಪಾರ್ವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಕರವಂಡ ಲವ ನಾಣಯ್ಯ, ಪಟ್ಟಮಾಡ ಕುಶ, ಮುಕ್ಕಾಟಿರ ಸುಬ್ಬಯ್ಯ, ಮಂದಪಂಡ ಮನೋಜ್, ಕೊಟ್ಟ್ಕತ್ತಿರ ಬಾಬಿ ಪಳಂಗಪ್ಪ, ಕೂಪದಿರ ಸಾಬು, ಮಂಗೇರಿರ ಜಗದೀಶ್, ಬೊಳ್ಳಾರ್ಪಂಡ ಸಾಬು ಚೆಂಗಪ್ಪ, ಮಣೋಟ್ಟಿರ ಜಗದೀಶ್, ಕರವಂಡ ರವಿ ಬೋಪಣ್ಣ, ಮಂದಪAಡ ಸೂರಜ್, ಪಟ್ಟಮಾಡ ನಾಚಪ್ಪ, ಮುಕ್ಕಾಟೀರ ಪೊನ್ನಣ್ಣ ಭಾಗವಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.