ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲೋನಿ ವಾಸಿ ಪಿ.ಸಿ.ವಿಷ್ಣು ಬೆಳ್ಳಿಯಪ್ಪ (65) ಅವರು ಮರ ಬಿದ್ದು ಮಂಗಳವಾರ ಮೃತಪಟ್ಟಿದ್ದಾರೆ.
ಅವರು ಬೆಳಿಗ್ಗೆ ಎದ್ದು ಮನೆಯಿಂದ ಹೊರಬರುತ್ತಿದ್ದಂತೆ ಮರ ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು.
ಕೊಡಗು ಜಿಲ್ಲೆಯಲ್ಲಿ ಗಾಳಿಯ ವೇಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಎಲ್ಲೆಂದರಲ್ಲಿ ಮರಗಳು ಬುಡಮೇಲಾಗುತ್ತಿದ್ದು ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮರ ಬಿದ್ದು ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.