ಮಡಿಕೇರಿ: ಮಡಿಕೇರಿ– ಮಂಗಳೂರು ರಸ್ತೆಯ ಮದೆನಾಡು ಸಮೀಪ ಗುಡ್ಡದಲ್ಲಿ ದೊಡ್ಡಗಾತ್ರದ ಬಿರುಕು ಮೂಡಿರುವುದರಿಂದ ಮಂಗಳವಾರ ಸಂಜೆ 9 ಗಂಟೆಯಿಂದ ಬುಧವಾರ ಬೆಳಿಗ್ಗೆ 6.30ರವರೆಗೂ ಎಲ್ಲ ಬಗೆಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ಸ್ಥಳದಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ಯಾವುದೇ ಕ್ಷಣದಲ್ಲಿ ಗುಡ್ಡದ ಒಂದು ಭಾಗದಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ರಾತ್ರಿ ವೇಳೆ ವಿಪರೀತ ಮಂಜು ಆವರಿಸುವುದರಿಂದ ಅಪಾಯ ಹೆಚ್ಚು. ಹೀಗಾಗಿ, ತಾತ್ಕಾಲಿಕವಾಗಿ ಒಂದು ರಾತ್ರಿ ಮಾತ್ರ ಸಂಚಾರ ನಿಷೇಧಿಸಲಾಗಿದೆ. ಬುಧವಾರ ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.