ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿದರು.
ವಿವಿಧ ತಂಡಗಳಿಂದ ನಡೆದ ಆಕರ್ಷಕ ಪಥಸಂಚಲನ ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.
ಸಂವಿಧಾನಕ್ಕೆ ಬದ್ದವಾಗಿ ಬದುಕುವ ಮನೋಭೂಮಿಕೆ ಇಂದಿನ ತುರ್ತು ಅಗತ್ಯವಾಗಿದೆ. ಆಗ ಮಾತ್ರವೇ ಸಂವಿಧಾನದ ಅತೀ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಪ್ರತಿಪಾದಿಸಿದರು.
ಸರ್ಕಾರದ ಪಂಚ ಗ್ಯಾರಂಟಿಗಳನ್ನು ಪ್ರಸ್ತಾಪಿಸಿದ ಅವರು ಜಿಲ್ಲೆಯಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳನ್ನು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.