ಮಡಿಕೇರಿ ಬಳಿಯ ಹರಿ ಮಂದಿರ ವಸತಿ ಶಾಲೆಯಲ್ಲಿ ಬೆಂಕಿ: 2ನೇ ತರಗತಿ ವಿದ್ಯಾರ್ಥಿ ಸಾವು
ಮಡಿಕೇರಿ: ಮಡಿಕೇರಿ ಸಮೀಪದ ಕಾಟಕೇರಿಯ ಹರಿ ಮಂದಿರ್ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ.
ಇನ್ನುಳಿದ 29 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಪಡೆ ಬೆಂಕಿ ನಂದಿಸಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಗೊತ್ತಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.