ADVERTISEMENT

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಮಂಜುನಾಥಗೆ ಸ್ಥಾನ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 4:41 IST
Last Updated 12 ಅಕ್ಟೋಬರ್ 2022, 4:41 IST
ಮಂಜುನಾಥ್
ಮಂಜುನಾಥ್   

ಮಡಿಕೇರಿ: ಯು.ಎಸ್.ಎ.ಯ ಸ್ಟ್ಯಾನ್‍ಫೋರ್ಡ್ ವಿವಿ ಹಾಗೂ ಎಲ್ಸ್ ವಿಯರ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ 2 ವಿಜ್ಞಾನಿಗಳ ಪಟ್ಟಿಯಲ್ಲಿ ಇಲ್ಲಿನಫೀಲ್ಡ್‍ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಜಿ.ಮಂಜುನಾಥ ಅವರು ಸತತ ಮೂರನೇ ಬಾರಿ ಸ್ಥಾನ ಪಡೆದಿದ್ದಾರೆ.

ಈ ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಲಾಗಿದೆ. ವೃತ್ತಿ ಜೀವಮಾನ ಸಾಧಕರು ಮತ್ತು 2022ನೇ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

ಮಂಜುನಾಥ ಅವರು ‘ಅನಲೈಟಿಕಲ್ ಮತ್ತು ಎನರ್ಜಿ’ ವಿಷಯಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2022ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 15,797ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 1,68,527ನೇ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.