
ಮಡಿಕೇರಿ: ಅಂತರರಾಷ್ಟ್ರೀಯ ಹೋಟೆಲ್ ನಿರ್ವಹಣಾ ಸಂಸ್ಥೆ (ಐಐಎಚ್‌ಎಂ) ವತಿಯಿಂದ ಇಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ಈಚೆಗೆ 50 ಮಂದಿ ಶಿಕ್ಷಕರನ್ನು ಗೌರವಿಸಲಾಯಿತು.
ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಮಾತನಾಡಿ, ‘ಶಿಕ್ಷಕರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು. ಜೊತೆಗೆ, ಸಂಸ್ಥೆಯು ಕೊಡಗಿನಲ್ಲಿ ತಮ್ಮ ಶಾಖೆಗಳನ್ನು ತೆರೆಯಬೇಕು’ ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ದಕ್ಷಿಣ ಭಾರತದ ನಿರ್ದೇಶಕ ಸಂಚಾರಿ ಚೌಧರಿ ಮಾತನಾಡಿ, ‘ನಮ್ಮ ಸಂಸ್ಥೆ ವತಿಯಿಂದ ಈ ಬಾರಿ ಕೊಡಗಿನಲ್ಲಿ ಸಾಧನೆಗೈದ 50 ಮಂದಿ ಶಿಕ್ಷಕರನ್ನು ಗೌರವಿಸುತ್ತಿರುವುದು ಅತ್ಯಂತ ಸಂತಸ ತಂದಿದೆ’ ಎಂದರು.
‘ಮುಂದಿನ ದಿನಗಳಲ್ಲಿ ಕೊಡಗಿನಲ್ಲಿ ನಮ್ಮ ಸಂಸ್ಥೆಯು ಶಾಖೆಯನ್ನು ಆರಂಭಿಸಿ ಕೊಡಗಿನ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಶಿಕ್ಷಣ ನೀಡುವ ಅಭಿಲಾಷೆ ಇದೆ’ ಎಂದು ತಿಳಿಸಿದರು.
ಸಂಸ್ಥೆಯ ಸ್ಥಾಪಕ ಡಾ ಸುವರ್ನೋ ಬೋಸ್ ಅವರು ವಿಡಿಯೊ ಮೂಲಕ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.
ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಮಾತನಾಡಿ, ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
ಯುಡಬ್ಲ್ಯೂಎಲ್ ಸಂಸ್ಥೆಯ ಕಾರ್ಯಕ್ರಮ ಪ್ರಮುಖರಾದ ಪಾರ್ವತಿ ಸುಬ್ಬಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.