ADVERTISEMENT

ಮಡಿಕೇರಿ: ಪರಿಷ್ಕೃತ ಪಠ್ಯಪುಸ್ತಕಗಳ ವಾಪಸ್ ಪಡೆಯಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 7:12 IST
Last Updated 17 ಜೂನ್ 2022, 7:12 IST
ಪರಿಷ್ಕೃತ ಪಠ್ಯಪುಸ್ತಕಗಳ ವಾಪಸ್ ಪಡೆಯಲು ಆಗ್ರಹಿಸಿ ಪ್ರತಿಭಟನೆ
ಪರಿಷ್ಕೃತ ಪಠ್ಯಪುಸ್ತಕಗಳ ವಾಪಸ್ ಪಡೆಯಲು ಆಗ್ರಹಿಸಿ ಪ್ರತಿಭಟನೆ   

ಮಡಿಕೇರಿ: ಪರಿಷ್ಕೃತ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಸಹಮತ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯಿಂದ ಆಗಿರುವ ಅದ್ವಾನಗಳನ್ನು ಸರಿಪಡಿಸದೆ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಬಾರದು, ಬರಗೂರು ರಾಮಚಂದ್ರಪ್ಪ ಸಮಿತಿ ರೂಪಿಸಿದ ಪಠ್ಯ ಪುಸ್ತಕಗಳನ್ನೆ ಮುಂದುವರಿಸಬೇಕು ಎಂದು ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಆಗ್ರಹಿಸಿದರು.

'ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ನಾಡಗೀತೆಗೆ ಅವಮಾನವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರಿರುವ ಮಹಾನ್ ಮಾನವತಾವಾದಿಗಳ ಸಂದೇಶ ಮುಖ್ಯ. ಅದನ್ನು ಬೋಧಿಸಲು ಸರ್ಕಾರ ಮುಂದಾಗಬೇಕು. ಮಕ್ಕಳ ಓದುವ ಮನಸ್ಸುಗಳ ಹಾದಿ ತಪ್ಪಿಸಬಾರದೆಂದು' ಹೇಳಿದರು.

ADVERTISEMENT

ವೇದಿಕೆಯ ಪದಾಧಿಕಾರಿಗಳಾದ ಮುನೀರ್ ಅಹಮ್ಮದ್, ಲಿಯಾಕತ್ ಆಲಿ, ಅಂಬೆಕಲ್ ಕುಶಾಲಪ್ಪ, ಕೆ.ಜಿ.ಪೀಟರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.