
ಪ್ರಜಾವಾಣಿ ವಾರ್ತೆ
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಕುಂಡಾಮೇಸ್ಟ್ರಿ ಮತ್ತು ಕೂಟುಹೊಳೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಮಡಿಕೇರಿ: ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಕುಂಡಾಮೇಸ್ತ್ರಿ ಮತ್ತು ಕೂಟುಹೊಳೆ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ನೀರಿನ ಸಂಗ್ರಹ, ಮುಂಬರುವ ಬೇಸಿಗೆಗೆ ಬೇಕಾದ ನೀರಿನ ಪ್ರಮಾಣ, ನೀರೆತ್ತುವ ಮೋಟಾರ್‌ನ ಸ್ಥಿತಿ ಸೇರಿದಂತೆ ಮತ್ತಿತ್ತರ ವಿವರಗಳನ್ನು ಅಧಿಕಾರಿಗಳಿಂದ ಪಡೆದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತ ಎಚ್.ಆರ್.ರಮೇಶ್, ಎಂಜಿನಿಯರ್‌ಗಳಾದ ಸತೀಶ್, ಹೇಮಂತ್ ಕುಮಾರ್, ಪ್ರಸನ್ನ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.