ADVERTISEMENT

ಮಡಿಕೇರಿ| ಕಾಡಾನೆ ದಾಳಿ; ಪಿಯು ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 4:06 IST
Last Updated 1 ಮಾರ್ಚ್ 2026, 4:06 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಮಡಿಕೇರಿ: ತಾಲ್ಲೂಕಿನ ಕಾಡಂಚಿನ ಗ್ರಾಮ‌ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಸಿಲುಕಿ ದ್ವಿತೀಯ ಪಿಯು ವಿದ್ಯಾರ್ಥಿನಿ ಪೂಜಾ (17) ಮೃತಪಟ್ಟಿದ್ದಾರೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರಲಿಲ್ಲ. ವಿದ್ಯಾರ್ಥಿನಿಯ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇದೆ. ಒಂಟಿ ಆನೆ ಈ ದಾಳಿ ನಡೆಸಿದೆ‌.‌ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಡಿಸಿಎಫ್ ಅಭಿಷೇಕ್ ಪ್ರಜಾವಾಣಿಗೆ ತಿಳಿಸಿದರು.

ADVERTISEMENT

ಕಾಡಾನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬೆಟ್ಟತ್ತೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.