ADVERTISEMENT

ಮಡಿಕೇರಿ: ಮಹಿಳೆ ಕೊಲೆ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 6:03 IST
Last Updated 4 ನವೆಂಬರ್ 2025, 6:03 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅಂದಗೋವೆ ಗ್ರಾಮದ ನಿವಾಸಿ ಲತಾ (45) ಅವರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಆರೋಪದ ಮೇರೆಗೆ ಮುತ್ತ (60) ಎಂಬಾತನನ್ನು ಬಂಧಿಸಲಾಗಿದೆ.

ಲತಾ ಮತ್ತು ಮುತ್ತ ಒಟ್ಟಿಗೆ ವಾಸ ಮಾಡುತ್ತಿದ್ದರು. ಭಾನುವಾರ ರಾತ್ರಿಯೇ ಲತಾ ಅವರ ಕೊಲೆಯಾಗಿದೆ. ಹಾಗಿದ್ದರೂ ಆರೋಪಿ ಯಾರಿಗೂ ತಿಳಿಸಿರಲಿಲ್ಲ‌. ಅನುಮಾನಾಸ್ಪದವಾಗಿ, ಒಬ್ಬನೇ ಓಡಾಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಪರಿಶೀಲಿಸಿದಾಗ ಕೊಲೆಯಾಗಿರುವುದು ಸೋಮವಾರ ಗೊತ್ತಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.