ADVERTISEMENT

ಮಡಿಕೇರಿ: ಗಾಂಧೀಜಿ ಚಿತಾಭಸ್ಮ ಮೆರವಣಿಗೆ, ಸರ್ವಧರ್ಮ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 8:50 IST
Last Updated 30 ಜನವರಿ 2023, 8:50 IST
ಹುತಾತ್ಮರ ದಿನದ ಪ್ರಯುಕ್ತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮ ಮೆರವಣಿಗೆ
ಹುತಾತ್ಮರ ದಿನದ ಪ್ರಯುಕ್ತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮ ಮೆರವಣಿಗೆ   

ಮಡಿಕೇರಿ: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನದ ಪ್ರಯುಕ್ತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಸೋಮವಾರ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಇದ್ದ ಚಿತಾಭಸ್ಮವನ್ನು ಪೊಲೀಸ್ ಗೌರವ ರಕ್ಷೆಯೊಂದಿಗೆ ಮೆರವಣಿಗೆಯಲ್ಲಿದ್ದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಗಾಂಧಿ ಮೈದಾನಕ್ಕೆ ತರಲಾಯಿತು.

ಚಿತಾಭಸ್ಮವನ್ನು ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಯಿತು‌.

ADVERTISEMENT

ಪೊಲೀಸ್ ವಾದ್ಯ ವೃಂದದವರ ವಾದನದ ಜತೆಗೆ ಪೊಲೀಸ್ ತಂಡವು ಗೌರವ ವಂದನೆ ಸಲ್ಲಿಸಿತು.

ನಂತರ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿ ಗಾಂಧಿ ಅವರನ್ನು ಸ್ತುತಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.