ADVERTISEMENT

ಸ್ಮಶಾನದಲ್ಲಿ ಗಾಂಜಾ ಗಿಡ ಬೆಳೆಸಿದ್ದ ವ್ಯಕ್ತಿ ಬಂಧನ

ಕುಶಾಲನಗರ: 19 ಗಿಡಗಳ ವಶ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2025, 15:44 IST
Last Updated 17 ಮಾರ್ಚ್ 2025, 15:44 IST
<div class="paragraphs"><p>ಬಂಧನ ( ಸಾಂಕೇತಿಕ ಚಿತ್ರ)</p></div>

ಬಂಧನ ( ಸಾಂಕೇತಿಕ ಚಿತ್ರ)

   

ಕುಶಾಲನಗರ: ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ‍ಪೊಲೀಸರು ಬಂಧಿಸಿದ್ದಾರೆ.

ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ (29) ಬಂಧಿತ ವ್ಯಕ್ತಿ.

ADVERTISEMENT

ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 1 ಕೆ.ಜಿ 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಪ್ರಶಾಂತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

‘ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ, ಸರಬರಾಜು ಹಾಗೂ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಸಿಐ ಪ್ರಕಾಶ್ ಮತ್ತು ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಗೀತಾ ಮತ್ತು ಸಿಬ್ಬಂದಿ ಹಾಗೂ ಡಿಸಿಆರ್‌ಬಿ ಸಿಬ್ಬಂದಿಗಳ ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡು ಅಕ್ರಮವಾಗಿ ಗಾಂಜಾ ಬೆಳೆದಿರುವುದನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ತಿಳಿಸಿದ್ದಾರೆ.

ಮಾಹಿತಿ ನೀಡಿ: ‘ಮಾದಕ ವಸ್ತುಗಳನ್ನು ಬಳಸುವ ಹಾಗೂ ಸರಬರಾಜು, ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗುಪ್ತವಾಗಿಡಲಾಗುವುದು’ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.