ADVERTISEMENT

ಸೋಮವಾರಪೇಟೆ | ಗಾಂಜಾ ಮಾರಾಟ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 13:22 IST
Last Updated 27 ಜೂನ್ 2025, 13:22 IST
ಗಣೇಶ್
ಗಣೇಶ್   

ಸೋಮವಾರಪೇಟೆ: ಬೇಳೂರು ಬಾಣೆಯ ಸಮೀಪ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬುಧವಾರ ಸಂಜೆ ಬಂಧಿಸಿ ₹3000 ಮೊತ್ತದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕೊಪ್ಪ ನಿವಾಸಿ ಕೆ.ಎಸ್. ಗಣೇಶ್ ಬಂಧಿತ. ಬಂಧಿತನಿಂದ 84 ಗ್ರಾಂ ಮಾದಕ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT