ನಾಪೋಕ್ಲು: ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದ ನಿವಾಸಿ ಬಿ.ಯು. ಶಾದುಲಿ (55) ಮಸೀದಿಯೊಳಗೆ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಮನೆ ಸಮೀಪದಲ್ಲಿರುವ ಬೈರಂಡಾಣೆ ಮಸೀದಿಯ ಮೇಲ್ಭಾಗದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದಾರೆ.
ನಾಪೋಕ್ಲು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.