ಸಾವು
(ಪ್ರಾತಿನಿಧಿಕ ಚಿತ್ರ)
ಹಳೇಬೀಡು: ಬೇಲೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಕಾರು ಡಿಕ್ಕಿ ಹೊಡೆದು ಪರಿಣಾಮ ದಾರಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಶಿವಲಿಂಗೇಗೌಡ(65) ಮೃತ ವ್ಯಕ್ತಿ. ಬೇಲೂರು ರಸ್ತೆಯಲ್ಲಿ ರಾಜನಶಿರಿಯೂರು ವೃತ್ತದ ಕಡೆಗೆ ನಡೆದು ಕೊಂಡು ಬರುತ್ತಿದ್ದಾಗ ಹಳೇಬೀಡಿನಿಂದ ಬೇಲೂರು ಕಡೆಗೆ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದಾಗ ತೀವ್ರ ಗಾಯಗೊಂಡಿದ್ದ ಶಿವಲಿಂಗೇಗೌಡ ಅವರನ್ನು ತಕ್ಷಣ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಲಿಂಗೇಗೌಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದರು.
ಡಿಕ್ಕಿ ಹೊಡೆದ ಕಾರು ಕೆಂಪು ಬಣ್ಣದಾಗಿತ್ತು. ಅಪಘಾತ ಸ್ಥಳದಲ್ಲಿ ನಿಲ್ಲಿಸಿದೆ ಪರಾರಿ ಆಯಿತು ಎಂದು ಸ್ಥಳದಲ್ಲಿದ್ದವರು ತಿಳಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.