ಮಡಿಕೇರಿ: ಮಂಗಳೂರು– ಮಡಿಕೇರಿ ರಸ್ತೆಯಲ್ಲಿ ಮದೆನಾಡು ಸಮೀಪ ಬಿರುಕು ಬಿಟ್ಟಿದ್ದ ಗುಡ್ಡದಿಂದಾಗಿ ರಾತ್ರಿ ಸಂಚಾರ ನಿಷೇಧಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ವಾಪಸ್ ಪಡೆದಿದ್ದಾರೆ.
ಸದ್ಯ, ಬಿರುಕು ಬಿಟ್ಟಿದ್ದ ಗುಡ್ಡದಿಂದ ಕುಸಿದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದೆ. ಉಳಿಕೆ ಮಣ್ಣಿನ ತೆರವು ಕಾರ್ಯವು ಬಿರುಸಿನಿಂದ ನಡೆಯುತ್ತಿದೆ. ಹಾಗಾಗಿ, ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.