ADVERTISEMENT

ಕೊಡಗಿನಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ: ಹೇಳಿಕೆ ಬದಲಿಸಿದ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 10:33 IST
Last Updated 31 ಮಾರ್ಚ್ 2020, 10:33 IST
ಸಚಿವ ವಿ ಸೋಮಣ್ಣ
ಸಚಿವ ವಿ ಸೋಮಣ್ಣ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೀನು ಸೇರಿದಂತೆ ಯಾವುದೇ ರೀತಿಯ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು. ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲೂ‌ ಕುರಿ ಹಾಗೂ ಕೋಳಿ ಮಾಂಸ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದರು. ಅದಾದ ಮೇಲೆ‌ ಯಾವುದೇ ಮಾಂಸ ಮಾರಾಟಕ್ಕೂ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.

ಆದರೆ, ದೇಶದಾದ್ಯಂತ ಲಾಕ್‌ಡೌನ್ ಇರುವುದರಿಂದ ಈ ಹಿಂದೆ ನಿರ್ಧಾರದಂತೆ ಯಾವುದೇ ರೀತಿಯ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.