ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 12:30 IST
Last Updated 22 ಏಪ್ರಿಲ್ 2021, 12:30 IST
ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಬಲಮುರಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು
ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಬಲಮುರಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು   

ಮಡಿಕೇರಿ: ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರವೂ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ.

ನಾಪೋಕ್ಲು, ಸಿದ್ದಾಪುರ, ಭಾಗಮಂಡಲ, ಕಕ್ಕಬ್ಬೆ, ಕರಿಕೆ ಭಾಗದಲ್ಲಿ ಭಾರೀ ಮಳೆಯಾಗಿದೆ. ಸಿದ್ದಾಪುರ, ನೆಲ್ಯಹುದಿಕೇರಿ, ಕರಡಿಗೋಡು, ಗುಹ್ಯ ಭಾಗದಲ್ಲೂ ಜೋರು ಮಳೆಯಾಗಿದೆ. ಬುಧವಾರ ರಾತ್ರಿಯೂ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿತ್ತು.

ಮಡಿಕೇರಿ–ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಾಳಿಗೆ ಬೃಹತ್‌ ಮರವೊಂದು ರಸ್ತೆ ಉರುಳಿ ಸಂಚಾರ ವ್ಯತ್ಯಯವಾಗಿತ್ತು. ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಾಗೂ ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.